(ನ್ಯೂಸ್ ಕಡಬ) newskadaba.com ಫೆ. 20. ಬೆಂಗಳೂರು: ಪ್ರಸಕ್ತ 2024-25ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಅನ್ನು ಮಾರ್ಚ್, ಏಪ್ರಿಲ್ ತಿಂಗಳಿನಲ್ಲಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಪರೀಕ್ಷೆ ನಡೆಸಲು ಎಲ್ಲಾ ರೀತಿಯ ತಯಾರಿ ನಡೆಸಲಾಗಿದೆ. ದ್ವಿತೀಯ ಪಿಯುಸಿ ಮಾರ್ಚ್ 1 ರಿಂದ 20 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ ನಡೆಯಲಿದೆ ಎಂದು ಹೇಳಿದರು.