(ನ್ಯೂಸ್ ಕಡಬ) newskadaba.com ಫೆ. 21. ರಾಜ್ಯ ಸರ್ಕಾರದ ಭ್ರಷ್ಟಾಚಾರ, ವೈಫಲ್ಯ, ಜನವಿರೋಧಿ ನೀತಿಗಳನ್ನು ಮುಂಬರುವ ಬಜೆಟ್ ಅಧಿವೇಶನದಲ್ಲಿ ಬಹಿರಂಗಪಡಿಸಲು ಬಿಜೆಪಿ ಪಕ್ಷ ಸಜ್ಜಾಗಿದೆ. ಇಂದು ವಿಧಾನಸೌಧದ ಕಚೇರಿಯಲ್ಲಿ ಮುಂಬರುವ ಬಜೆಟ್ ಅಧಿವೇಶನ ಕುರಿತು ಮಹತ್ವದ ಚರ್ಚೆ ನಡೆಯಿತು. ಸದನದಲ್ಲಿ ಪ್ರಶ್ನೆಗಳನ್ನು ಕೇಳುವುದು, ಚರ್ಚೆಗೆ ಒಳಪಡಿಸುವ ವಿಷಯಗಳು ಹಾಗೂ ನಿಲುವಳಿ ಸೂಚನೆಯ ಮಂಡನೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಲಾಯಿತು.


ರಾಜ್ಯ ಸರ್ಕಾರದ ಭ್ರಷ್ಟಾಚಾರ, ವೈಫಲ್ಯ, ಜನವಿರೋಧಿ ನೀತಿಗಳನ್ನು ಬಹಿರಂಗಪಡಿಸಲು ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಸದನದಲ್ಲಿ ಬಲವಾದ ಪ್ರತಿಪಕ್ಷದ ಹೋರಾಟ ನಡೆಯಲಿದೆ. ಈ ಕುರಿತು ಸರ್ವ ಸದಸ್ಯರು ತೀವ್ರ ಚರ್ಚೆ ನಡೆಸಿ, ಸರ್ಕಾರದ ಅಸಮರ್ಥತೆ ವಿರುದ್ಧ ರಾಜ್ಯದ ಜನತೆಗಾಗಿ ಪ್ರಭಾವೀ ನಿಲುವು ಕೈಗೊಳ್ಳಲು ನಿರ್ಧರಿಸಲಾಯಿತು.