ಮಹಾಕುಂಭ ಮೇಳ: ಉತ್ತರ ಪ್ರದೇಶದ ಆರ್ಥಿಕತೆಗೆ ರೂ. 3ಲಕ್ಷ ಕೋಟಿಗೂ ಹೆಚ್ಚಿನ ಹಣ!

(ನ್ಯೂಸ್ ಕಡಬ) newskadaba.com ಫೆ. 21. ಲಖನೌ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ರಾಜ್ಯದ ಆರ್ಥಿಕತೆಗೆ 3 ಲಕ್ಷ ಕೋಟಿ ರೂ.ಗಿಂತ ಹೆಚ್ಚಿನ ಹಣವನ್ನು ತರಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ.

ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಸಮಾಜವಾದಿ ಪಕ್ಷದ ಶಾಸಕಿ ರಾಗಿಣಿ ಸೋಂಕರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ, ಕಳೆದ ಎಂಟು ವರ್ಷಗಳಲ್ಲಿ ಸರ್ಕಾರ ಎಂಟು ಕೋಟಿಗೂ ಹೆಚ್ಚು ಜನರನ್ನು ಬಡತನ ರೇಖೆಯಿಂದ ಹೊರತಂದಿದೆ ಎಂದು ಹೇಳಿದರು.

ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 25 ಕೋಟಿ ಜನರನ್ನು ಬಡತನ ರೇಖೆಯಿಂದ ಮೇಲಕ್ಕೆ ತರಲು ಸಾಧ್ಯವಾಗಿದೆ. ಕಳೆದ ಎಂಟು ವರ್ಷಗಳಲ್ಲಿ ನಮ್ಮ ಸರ್ಕಾರ ಆರು ಕೋಟಿಗೂ ಹೆಚ್ಚು ಜನರನ್ನು ಬಡತನದಿಂದ ಹೊರತಂದಿರುವುದಕ್ಕೆ ಹೆಮ್ಮೆಪಡಬೇಕು. ಇದು ಎಲ್ಲಾ ಕ್ಷೇತ್ರಗಳಲ್ಲಿ ಬದಲಾವಣೆಗಳ್ನು ತೋರಿಸುತ್ತದೆ ಎಂದರು.

Also Read  ಪ್ರವೀಣ್ ಹತ್ಯೆ ಪ್ರಕರಣ - ಆರೋಪಿಗಳ ಪತ್ತೆಗೆ ಐದು ತಂಡ ರಚನೆ ➤ ಶಂಕಿತ ಹಲವರ ತೀವ್ರ ವಿಚಾರಣೆ

error: Content is protected !!
Scroll to Top