‘ಗಂಗಾ ನೀರು ಶುದ್ದವಾಗಿದೆ, ಚರ್ಮ ರೋಗಗಳು ಕೂಡ ಬರುವುದಿಲ್ಲ’ – ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್

(ನ್ಯೂಸ್ ಕಡಬ) newskadaba.com ಫೆ. 22. ಮಹಾ ಕುಂಭಮೇಳದ ತ್ರಿವೇಣಿ ಸಂಗಮದ ನೀರಿನ ಶುದ್ಧತೆ ಬಗ್ಗೆ ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಈ ಮಧ್ಯೆ ಗಂಗಾ ನೀರು ಶುದ್ದವಾಗಿದೆ, ಸ್ನಾನಕ್ಕೆ ಸುರಕ್ಷಿತವಾಗಿದೆ. ಅಲ್ಲದೆ ಚರ್ಮ ರೋಗಗಳು ಕೂಡ ಬರುವುದಿಲ್ಲ ಎಂದು ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್ ಹೇಳಿದ್ದಾರೆ.

ಸಂಗಮ್ ಮತ್ತು ಅರೈಲ್ ಸೇರಿದಂತೆ ಐದು ಘಾಟ್‌ಗಳಿಂದ ಗಂಗಾ ನೀರಿನ ಪ್ರಯೋಗಾಲಯ ಪರೀಕ್ಷೆಯ ನಂತರ ಅವರು ಈ ಹೇಳಿಕೆ ನೀಡಿದ್ದಾರೆ. ಐದು ಘಾಟ್‌ಗಳಿಂದ ಗಂಗಾ ನೀರಿನ ಮಾದರಿಗಳನ್ನು ತೆಗೆದುಕೊಂಡು ಪ್ರಯೋಗಾಲಯದಲ್ಲಿ ಸೂಕ್ಷ್ಮ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಅವಧಿಯಲ್ಲಿ ಕೋಟ್ಯಂತರ ಭಕ್ತರು ಸ್ನಾನ ಮಾಡಿದರೂ ನೀರಿನಲ್ಲಿ ಬ್ಯಾಕ್ಟೀರಿಯಾದ ಬೆಳವಣಿಗೆಯಾಗಲಿ ಅಥವಾ ನೀರಿನ pH ಮಟ್ಟದಲ್ಲಿ ಯಾವುದೇ ಇಳಿಕೆಯಾಗಲಿ ಕಂಡುಬಂದಿಲ್ಲ. ಈ ಸಂಶೋಧನೆಯಲ್ಲಿ ಗಂಗಾ ನೀರಿನಲ್ಲಿ 1100 ವಿಧದ ಬ್ಯಾಕ್ಟೀರಿಯೊ ಫೇಜ್‌ಗಳು ಇರುವುದು ಕಂಡುಬಂದಿದೆ. ಇದು ಹಾನಿಕಾರಕ ಬ್ಯಾಕ್ಟೀರಿಯಾವನ್ನು ನಾಶಪಡಿಸುತ್ತದೆ. ಇದರಿಂದಾಗಿ ನೀರು ಕಲುಷಿತವಾಗಲಿಲ್ಲ ಎಂದು ಹೇಳಿದ್ದಾರೆ.

error: Content is protected !!
Scroll to Top