(ನ್ಯೂಸ್ ಕಡಬ) newskadaba.com ಫೆ. 24. ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಫೆ.24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆ ಹಾಗೂ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ. ಒಳನಾಡಿನ ಒಂದೆರಡು ಪ್ರದೇಶಗಳಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಬೆಂಗಳೂರು ಮತ್ತು ಸುತ್ತಮುತಲಿನ ಪ್ರದೇಶಗಳದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 19°C ಇರುವ ಸಾಧ್ಯತೆ ಇದೆ.