(ನ್ಯೂಸ್ ಕಡಬ) newskadaba.com ಫೆ. 24. ಬೆಂಗಳೂರು: ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ರಿಲೀಫ್ ನೀಡಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೊಮ್ಮೆ ಗಡುವು ವಿಸ್ತರಿಸಲಾಗಿದ್ದು, ಮಾರ್ಚ್ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸತತ 8ನೇ ಬಾರಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸಿದಂತಾಗಿದೆ.



ಈ ಹಿಂದೆ ಜನವರಿ 31ರವರೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಸಾರಿಗೆ ಇಲಾಖೆ ಮತ್ತೆ ಮಾರ್ಚ್ 31ರವರೆಗೆ ಗಡುವು ವಿಸ್ತರಣೆ ಮಾಡಿದೆ. ಈ ಮೂಲಕ 8 ತಿಂಗಳ ಕಾಲ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆಯಾಗಿದೆ.