(ನ್ಯೂಸ್ ಕಡಬ) newskadaba.com ಫೆ. 24. ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಗೃಹ ಲಕ್ಷ್ಮಿ ಹಣವನ್ನು ಒಂದು ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳೀದ್ದಾರೆ.


ವಿರೋಧ ಪಕ್ಷ ಬಿಜೆಪಿ ಮತ್ತು ಅದರ ನಾಯಕರು ಏನೇ ಅಪಪ್ರಚಾರ ಮಾಡಲಿ. ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ೮ ದಿನದಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.