(ನ್ಯೂಸ್ ಕಡಬ) newskadaba.com ಫೆ. 24. ಬೆಂಗಳೂರು: ಕರ್ನಾಟಕ ರಾಜ್ಯದ ಆಡಳಿತ ಕೇಂದ್ರವಾಗಿರುವ ಬೆಂಗಳೂರಿನ ವಿಧಾನ ಸೌಧದಲ್ಲಿ ಫೆ.27ರಿಂದ ಮಾ.3ರವರೆಗೆ ಪುಸ್ತಕ ಮೇಳವನ್ನು ಆಯೋಜನೆ ಮಡಲಾಗುತ್ತಿದೆ. ನಾಲ್ಕು ದಿನಗಳ ಕಾಲ ಸಾರ್ವಜನಿಕರಿಗೆ ವಿಧಾನ ಸೌಧದೊಳಗೆ ಬರಲು ಮುಕ್ತ ಅವಕಾಶ ನೀಡಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ.


ಬೆಂಗಳೂರು ವಿಧಾನಸೌಧದಲ್ಲಿ ಪುಸ್ತಕ ಸಮ್ಮೇಳನ ಆಯೋಜನೆ ಮಾಡುವ ಕುರಿತು ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ವಿಧಾನ ಸೌಧದಲ್ಲಿ ಬೃಹತ್ ಪುಸ್ತಕ ಮೇಳವನ್ನು ಆಯೋಜಿಸಿದ್ದೇವೆ. ಸರ್ವರಿಗೂ ಇರುವ ವಿಧಾನ ಸೌಧದಲ್ಲಿ ಪುಸ್ತಕ ಪ್ರಕಾಶಕರನ್ನ ಗಮನದಲ್ಲಿಟ್ಟುಕೊಂಡು ಆಯೋಜಿಸಿದ್ದೇವೆ. ನಮ್ಮ ರಾಜ್ಯದಲ್ಲಿ ಸಾಹಿತ್ಯಕ್ಕೆ ಕೊಡುಗೆ ಕೊಡುವವರು ಪ್ರಕಾಶಕರು ಆಗಿದ್ದಾರೆ. ಪ್ರಕಾಶಕರಿಂದ ಸಾಹಿತ್ಯ ಜನರಿಗೆ ತಲುಪಲಿದೆ ಎಂದರು.