(ನ್ಯೂಸ್ ಕಡಬ) newskadaba.com ಫೆ. 24. ಪುತ್ತೂರು: ತನ್ನ ಪತ್ನಿಯ ಹೆರಿಗೆಯ ಸಂದರ್ಭ ವೈದ್ಯರ ನಿರ್ಲಕ್ಷ್ಯದಿಂದ ಹೊಟ್ಟೆಯಲ್ಲೇ ಬಟ್ಟೆ ಉಳಿದು, ಸೋಂಕಿಗೆ ಕಾರಣವಾದ ಬ್ಯಾಕ್ಟಿರಿಯ ದೇಹದ ವಿವಿಧ ಭಾಗಕ್ಕೆ ಹೋದ ಕಾರಣ ಪತ್ನಿಯ ಪರಿಸ್ಥಿತಿ ಗಂಭೀರ ಸ್ಥಿತಿಗೆ ತಲುಪಿತ್ತು.


ಮೂರು ತಿಂಗಳಿನಿಂದ ದೈಹಿಕ ಮತ್ತು ಮಾನಸಿಕ ಯಾತನೆಯಲ್ಲಿ ದಿನಕಳೆಯುವ ನಿರ್ಮಾಣವಾಗಿದ್ದು, ಸಂಬಂಧಪಟ್ಟವರು ಈ ಬಗ್ಗೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡಬೇಕೆಂದು ಮಹಿಳೆಯ ಪತಿ, ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಬಂಗಾರಡ್ಕ ನಿವಾಸಿ ಗಗನ್ ದೀಪ್ ಬಿ. ಆಗ್ರಹಿಸಿದ್ದಾರೆ.