ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ರದ್ದು

(ನ್ಯೂಸ್ ಕಡಬ) newskadaba.com ಫೆ. 25: ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾವು ನಿನ್ನೆಯಿಂದ ಮಹಾರಾಷ್ಟ್ರಕ್ಕೆ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದ್ದೇವೆ. ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮ (ಎಂಎಸ್‌ಆರ್‌ಟಿಸಿ) ಕೂಡ ಕರ್ನಾಟಕಕ್ಕೆ ಬಸ್‌ಗಳ ಸಂಚಾರವನ್ನು ನಿಲ್ಲಿಸಿದೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ವಿವರಿಸಿದರು. ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ (ಕೆಆರ್ವಿ) ಇಂದು ಬೆಳಗಾವಿ ಚಲೋ ಗೆ ಕರೆ ನೀಡಿದೆ. ಬೆಳಗಾವಿಯಲ್ಲಿ ಮೆರವಣಿಗೆ ನಡೆಸಿ, ಪ್ರತಿಭಟನೆ ನಡೆಸಿ ಸಾರ್ವಜನಿಕ ಸಭೆ ನಡೆಸಲು ನಿರ್ಧರಿಸಲಾಗಿದೆ.

error: Content is protected !!
Scroll to Top