(ನ್ಯೂಸ್ ಕಡಬ) newskadaba.com ಫೆ. 25 ಮಲ್ಪೆ: ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಬಳಿ ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ವಿದೇಶಿ ಬೋಟನ್ನು ಕರಾವಳಿ ಕಾವಲು ಪೊಲೀಸ್ ಹಾಗೂ ಮಂಗಳೂರು ಕೋಸ್ಟ್ ಗಾರ್ಡ್ ವಶಕ್ಕೆ ಪಡೆದುಕೊಂಡಿದ್ದು, ಅದರಲ್ಲಿದ್ದ ಮೂವರು ತಮಿಳುನಾಡು ಮೂಲದ ಮೀನುಗಾರರನ್ನು ಬಂಧಿಸಲಾಗಿದೆ.

ಬಂಧಿತರನ್ನು ಭಾರತೀಯ ಮೂಲದ ತಮಿಳುನಾಡು ನಿವಾಸಿಗಳೆನ್ನಲಾದ ಜೇಮ್ಸ್ ಫ್ರಾಂಕ್ಲಿನ್, ರಾಬಿನ್ ಸ್ಟನ್, ಡಿರೋಸ್ ಅಲ್ಫೋನ್ಸ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.