(ನ್ಯೂಸ್ ಕಡಬ) newskadaba.com ಫೆ. 26: ಮಂಗಳೂರು: ಹೊರನಾಡು ಸಮೀಪದ ಮಾವಿನಹೊಳ-ಬಲಿಗೆ ಗುಡ್ಡದಲ್ಲಿ ಕಾಡ್ಗಿಚ್ಚಿನ ಪರಿಣಾಮ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.

ಮಂಗಳವಾರ ಸಂಜೆ ಕಾಡಿಗೆ ಬೆಂಕಿ ಹಬ್ಬಿದ್ದು ಅರಣ್ಯ ಹೊತ್ತಿ ಉರಿದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸಪಟ್ಟರೂ ಗಾಳಿಗೆ ವೇಗಕ್ಕೆ ಬೆಂಕಿಯ ಕೆನ್ನಾಲಿಗೆ ಹಬ್ಬುತ್ತಲೇ ಹೋಗಿದ್ದು ಬೆಂಕಿ ನಂದಿಸುವುದು ಸವಾಲಾಗಿತ್ತು. ಕೊನೆಗೂ ಅರಣ್ಯ ಸಿಬ್ಬಂದಿಗಳು ಮತ್ತು ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಜ್ವಾಲೆಗೆ ಸಸ್ಯಸಂಪತ್ತು ನಾಶವಾಗಿರುವ ಜೊತೆಗೆ ಪ್ರಾಣಿ-ಪಕ್ಷಿಗಳು ಕೂಡ ಸುಟ್ಟುಕರಕಲಾಗಿವೆ ಎಂದು ಹೇಳಲಾಗಿದೆ.