ಪ್ರವಾಸೋದ್ಯಮ ವಲಯದಲ್ಲಿ 8,000 ಕೋಟಿ ರೂ.ಹೂಡಿಕೆ, 1.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ: ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಫೆ. 27: ಬೆಂಗಳೂರು: 2024-29ರ ಕರ್ನಾಟಕ ಪ್ರವಾಸೋದ್ಯಮ ನೀತಿ ಕಾರ್ಯಗತಗೊಳಿಸಲು 1,350 ಕೋಟಿ ರೂ.ಗಳ ಒದಗಿಸಲಾಗಿದ್ದು, ಈ ನೀತಿಯ ಮೂಲಕ 8,000 ಕೋಟಿ ನೇರ ಹೂಡಿಕೆ ಆಕರ್ಷಿಸಲು ಮತ್ತು 1.5 ಲಕ್ಷ ಉದ್ಯೋಗಾವಕಾಶ ಸೃಷ್ಟಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.

ಬುಧವಾರ ನಗರದ ಖಾಸಗಿ ಹೋಟೆಲ್ ತಾಜ್ ವೆಸ್ಟ್ ಎಂಡ್ ನಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟೂರಿಸಮ್ ಸೊಸೈಟಿ ಇವರ ಸಂಯುಕ್ತಾಶ್ರಯದಲ್ಲಿ ಎರಡನೇ ಆವೃತ್ತಿಯ “ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ-2025″ ಸಮಾವೇಶ ವನ್ನು ದೀಪ ಬೆಳಗಿಸುವ ಮೂಲಕ ಮುಖ್ಯಮಂತ್ರಿಗಳು ಉದ್ಘಾಟಿಸಿದರು.

Also Read  ಜೂನ್ 20ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ

ಬಳಿಕ ಮಾತನಾಡಿದ ಅವರು, ಇಂದು ಪ್ರವಾಸೋದ್ಯಮದಲ್ಲಿ ಜಾಗತಿಕವಾಗಿ ಕರ್ನಾಟಕ ಗುರುತಿಸಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ. ಕರ್ನಾಟಕವನ್ನು ಪ್ರವಾಸೋದ್ಯಮದಲ್ಲಿ ಜಾಗತಿಕವಾಗಿ ಗುರುತಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿವಿಧತೆಯಲ್ಲಿ ಏಕತೆ ಎಂಬಂತೆ ರಾಜ್ಯ ಎಲ್ಲಾ ರೀತಿಯ ಪ್ರವಾಸಿ ತಾಣಗಳನ್ನು ಹೊಂದಿದೆ, ಹಲವು ಜಗತ್ತು ಒಂದು ರಾಜ್ಯ ನಮ್ಮದು ಎಂದು ಹೇಳಲು ಹೆಮ್ಮೆ ಎನಿಸುತ್ತದೆ ಎಂದು ಹೇಳಿದರು.

error: Content is protected !!
Scroll to Top