ವಕ್ಫ್ ಮಸೂದೆ: ಜೆಪಿಸಿ ತಿದ್ದುಪಡಿಗಳಿಗೆ ಕೇಂದ್ರ ಸಂಪುಟ ಅಸ್ತು

(ನ್ಯೂಸ್ ಕಡಬ) newskadaba.com ಫೆ. 27 ಹೊಸದಿಲ್ಲಿ: ವಕ್ಫ್ (ತಿದ್ದುಪಡಿ) ಮಸೂದೆಗೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಂಸದೀಯ ಮಂಡಳಿ ಶಿಫಾರಸ್ಸು ಮಾಡಿರುವ ಈ ತಿದ್ದುಪಡಿಯನ್ನು ಮಸೂದೆಗೆ ಸೇರಿಸುವ ಮೂಲಕ ಬಜೆಟ್ ಅಧಿವೇಶನದ ಉತ್ತರಾರ್ಧದಲ್ಲಿ ಮಸೂದೆಯನ್ನು ಸನದಲ್ಲಿ ಮಂಡಿಸಿ, ಚರ್ಚಿಸಿ ಅನುಮೋದನೆ ನಡೆಯಲು ಹಾದಿ ಸುಗಮಗೊಂಡಂತಾಗಿದೆ.

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯಲ್ಲಿ ಮಂಡಿಸಿದ ಬಳಿಕ 2024ರ ಆಗಸ್ಟ್ ನಲ್ಲಿ ಈ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಪರಾಮರ್ಶೆಗೆ ನೀಡಲಾಗಿತ್ತು. ಜಂಟಿ ಸಂಸದೀಯ ಸಮಿತಿಯಲ್ಲಿರುವ ವಿರೋಧ ಪಕ್ಷಗಳಿಗೆ ಸೇರಿದ ಎಲ್ಲ 11 ಮಂದಿ ಸಂಸದರು ವರದಿಗೆ ಆಕ್ಷೇಪ ವ್ಯಕ್ತಪಡಿಸಿದರೂ, ಬಹುಮತದಿಂದ ವರದಿಯನ್ನು ಸಮಿತಿ ಆಂಗೀಕರಿಸಿದೆ. ಈ ಸಂಸದರು ಭಿನ್ನಾಭಿಪ್ರಾಯ ಟಿಪ್ಪಣಿಯನ್ನೂ ನೀಡಿದ್ದಾರೆ.

error: Content is protected !!
Scroll to Top