(ನ್ಯೂಸ್ ಕಡಬ) newskadaba.com ಫೆ. 27 ರಾಜ್ಯದ ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬಿದೆ. ಇವತ್ತಾ ನಾಳೆಯಾ ಎಂಬ ಪರಿಸ್ಥಿತಿಗೆ ಅದು ತಲುಪಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು.


ನಗರದ ಫ್ರೀಡಂ ಪಾರ್ಕಿನಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂತಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಡಿ ಹೋರಾಟ ನಡೆಸುತ್ತಿರುವ ಶುಶ್ರೂಧಿಕಾರಿಗಳ ನೋವಿನಲ್ಲಿ ನನಗೂ ಪಾಲಿದೆ. ನಿಮ್ಮ ಹೋರಾಟದಲ್ಲಿ ನಾನೂ ಜೊತೆಗೂಡುವೆ ಎಂದರು.
ಸದನದಲ್ಲಿ ನಿಮ್ಮ ಸಮಸ್ಯೆಗಳನ್ನು ಪಟ್ಟಿ ಮಾಡಿ ಈ ಸರಕಾರದ ಗಮನ ಸೆಳೆಯುವ ಕೆಲಸ ಮಾಡುತ್ತೇನೆ. ನಿಮ್ಮ ಸದಸ್ಯನ ರೂಪದಲ್ಲಿ ಅಲ್ಲಿ ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.