(ನ್ಯೂಸ್ ಕಡಬ) newskadaba.com ಫೆ. 27 ಬೆಂಗಳೂರು: ಮುಂದಿನ ದಿನಗಳಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಮತ್ತೆ ಪಕ್ಷ ಅಧಿಕಾರಕ್ಕೆ ತರುವ ಕೆಲಸ ಮಾಡಿ, ಪಕ್ಷ ಬಲಪಡಿಸ್ತೇವೆ.ಸೂರ್ಯ ಚಂದ್ರರಷ್ಟೇ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭವಿಷ್ಯ ನುಡಿದಿದ್ದಾರೆ.


ಸುದ್ದಿಗಾರರ ಜೊತೆ ಮಾತನಾಡಿದ ಅವರು, ನನಗೆ ಇವತ್ತು 82 ತುಂಬಿ 83 ನೇ ವರ್ಷಕ್ಕೆ ಕಾಲಿಟ್ಟಿದ್ದೇನೆ. ರಾಜ್ಯಾದ್ಯಂತ ಅಭಿಮಾನಿಗಳು ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರ ಮಾಡಿ ಶುಭ ಕೋರಿದ್ದಾರೆ. ಅವರೆಲ್ಲರಿಗೂ ಒಳ್ಳೇದಾಗಲಿ.ನನಗೆ ರಾಜ್ಯದಲ್ಲಿ ಅನೇಕ ಸ್ಥಾನಮಾನ ನೀಡಿ ಸಿಎಂ ಆಗಿ ಕೆಲಸ ಮಾಡುವ ಸೌಭಾಗ್ಯ ರಾಜ್ಯದ ಜನ ಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.