(ನ್ಯೂಸ್ ಕಡಬ) newskadaba.com ಫೆ. 27 ನವದೆಹಲಿ: ಚಿನಿವಾರ ಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಚಿನ್ನದ ಬೆಲೆ ಕುಸಿತ ಕಂಡಿದೆ. 10 ಗ್ರಾಂ ಚಿನ್ನದ ದರವು 723 ರೂಪಾಯಿ ಕಡಿಮೆಯಾಗಿದೆ.

ಫ್ಯೂಚರ್ಸ್ ವಹಿವಾಟಿನಲ್ಲಿ 10 ಗ್ರಾಂಗೆ 723 ರೂಪಾಯಿ ಅಥವಾ ಶೇ 0.84ರಷ್ಟು ಕುಸಿತ ಕಂಡಿದ್ದು, 85,151 ರೂಪಾಯಿಗೆ ತಲುಪಿದೆ.
ದೇಶೀಯ ಮಾರುಕಟ್ಟೆಯಲ್ಲಿ ಆಭರಣ ತಯಾರಕರು ಮತ್ತು ಚಿಲ್ಲರೆ ಮಾರಾಟಗಾರರಿಂದ ಬೇಡಿಕೆ ಕಡಿಮೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲೂ ಚಿನ್ನಕ್ಕೆ ಬೇಡಿಕೆ ಕಡಿಮೆಯಾಗಿದ್ದು, ಹಳದಿ ಲೋಹದ ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.