(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯ ಓದುವುದರಿಂದ ಮನುಷ್ಯನು ಮಾನವೀಯತೆ ಮೆರೆಯುತ್ತಾನೆ. ಹೀಗಾಗಿ ಪ್ರತಿಯೊಬ್ಬರು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.
ಇದೇ ಮೊದಲ ಬಾರಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿರುವ ಪುಸ್ತಕ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು. ವಿಧಾನಸೌಧದಲ್ಲಿ ಓದುಗರು, ಸಾಹಿತ್ಯಾಭಿಮಾನಿಗಳಿಗೆ ಸಂತೆ ಏರ್ಪಡಿಸಲಾಗಿದ್ದು, ಸಾಹಿತ್ಯಾಸಕ್ತರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಇದೊಂದು ಉತ್ತಮ ಬೆಳವಣಿಗೆ ಮುಂದೆ ಪ್ರತಿ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕೋತ್ಸವ ನಡೆಯಲಿದ್ದು, ಪ್ರತಿಯೊಬ್ಬರೂ ಪುಸ್ತಕ ಖರೀದಿಸಿ, ಮನೆಯಲ್ಲಿ ಗ್ರಂಥಾಲಯ ಹೊಂದಬೇಕು. ಇದರಿಂದ ಮಕ್ಕಳು ಮೊಬೈಲ್, ಡಿಜಿಟಲ್ ವ್ಯಸನದಿಂದ ಮುಕ್ತಿ ಹೊಂದಬೇಕು ಎಂದು ಸಲಹೆ ನೀಡಿದರು.