(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಮಾರ್ಚ್ 20ರ ವರೆಗೆ ಪರೀಕ್ಷೆ ನಡೆಯಲಿದೆ.

ಈ ಬಾರಿ ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಪೈಕಿ 3,35,468 ಗಂಡು ಮಕ್ಕಳು, 3,78,389 ಹೆಣ್ಣು ಮಕ್ಕಳು ಹಾಗೂ ಐವರು ತೃತೀಯ ಲಿಂಗಿಗಳು ಸೇರಿದ್ದಾರೆ. ಒಟ್ಟು 1,171 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಇದರೊಂದಿಗೆ 2,342 ಸ್ಥಾನಿಕ ಜಾಗೃತದಳ, 76 ಉತ್ತರ ಪತ್ರಿಕೆ ಮೌಲ್ಯಮಾಪನ ಕೇಂದ್ರಗಳು ಹಾಗೂ 31,000 ಮೌಲ್ಯಮಾಪಕರನ್ನ ಕರ್ತವ್ಯ ನಿರ್ವಹಿಸಲಿದ್ದಾರೆ.