ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಕೇಸ್‌: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು: ದೆಹಲಿ ರೈಲ್ವೆ ನಿಲ್ದಾಣದಲ್ಲಿಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಜನಸಂದಣಿ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಈ ಕಾಲ್ತುಳಿತ ಪ್ರಕರಣದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಇಲಾಖೆ ಹೇಳಿದೆ. ಹೀಗಾಗಿ ಎಲ್ಲ ರಾಜ್ಯಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಜನಸಂದಣಿ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಂತೆ ಮತ್ತು ನಿರ್ದೇಶನ ನೀಡುವಂತೆ ಆನಂದ್ ಕಾನೂನು ನೆರವು ವೇದಿಕೆ ಮನವಿ ಮಾಡಿತ್ತು.

Also Read  ಭಾರೀ ಮಾದಕ ವಸ್ತು ಜಾಲ ಬಯಲು; 2000 ಕೋಟಿ ಮೌಲ್ಯದ ಕೊಕೇನ್ ಸೀಜ್

ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಅರ್ಜಿದಾರರ ವಾದ ಪುರಸ್ಕರಿಸಲಿಲ್ಲ, 200 ಸಾವುಗಳು ಸಂಭವಿಸಿವೆ ಎಂಬ ಆರೋಪಕ್ಕೆ ಪುರಾವೆ ಏನಿದೆ ಎಂದು ಪ್ರಶ್ನಿಸಿತು. ಅರ್ಜಿದಾರರ ಪರ ವಕೀಲರ ಸಂಕ್ಷಿಪ್ತ ವಿಚಾರಣೆಯ ನಂತರ ಅರ್ಜಿಯನ್ನು ವಜಾಗೊಳಿಸಿತು. ಬಾಧಿತ ಜನರು ನ್ಯಾಯಾಲಯಕ್ಕೆ ಬರಬೇಕು ಎಂದು ಕೋರ್ಟ್ ತಿಳಿಸಿತ್ತು.

error: Content is protected !!
Scroll to Top