(ನ್ಯೂಸ್ ಕಡಬ) newskadaba.com ಮಾ. 01 ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಮಡಿವಾಳ ಅವರ ಮಗ ಪಿಯುಸಿ ವಿದ್ಯಾರ್ಥಿ ದಿಗಂತ್ ಅವರ ನಿಗೂಡ ನಾಪತ್ತೆಯಾಗಿ 5 ದಿನಗಳು ಕಳೆದರೂ ಪೊಲೀಸ್ ಇಲಾಖೆ ಹಾಗೂ ಸರಕಾರದ ಯಾವುದೇ ರೀತಿಯ ಕಾರ್ಯಾಚರಣೆ ಯಶಸ್ವಿ ಕಾಣದೆ ಇರುವುದರಿಂದ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
