ಮಾ.22ಕ್ಕೆ ಕರ್ನಾಟಕ ಬಂದ್: ಪರೀಕ್ಷೆ ಮುಂದೂಡಿಕೆ ಸಾಧ್ಯವಿಲ್ಲ, 6 ವರ್ಷದ ನಿಯಮದಲ್ಲಿ ಸಡಿಲಿಕೆಯಿಲ್ಲ; ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಮಾ. 01 ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.22 ರಂದು 7,8,9ನೇ ತರಗತಿ ಪರೀಕ್ಷೆಗಳ ನಿಗದಿಯಾಗಿದೆ. ಬಂದ್ ಎಂದು ಈಗ ಮುಂದೂಡಿಕೆ ಸಾಧ್ಯವಿಲ್ಲ. ಬಂದ್ ಇದ್ದರೂ ಯಾವುದೇ ಪರೀಕ್ಷೆ ಮುಂದೂಡಿಕೆ ಮಾಡುವುದಿಲ್ಲ. ಪರೀಕ್ಷೆ ಅದರ ಪಾಡಿಗೆ ನಡೆಯಲಿದೆ ಎಂದು ಹೇಳಿದರು. ಮಕ್ಕಳಿಗೆ ಯಾವುದೇ ತೊಂದರೆ ಆಗದ ರೀತಿ ಸಹಕಾರ ನೀಡಬೇಕೆಂದು ಹೋರಾಟಗಾರರಿಗೆ ಮನವಿ ಮಾಡುತ್ತೇನೆ. ಹೋರಾಟ ಮಾಡೋಕೆ ನಿಮಗೆ ಹಕ್ಕು ಇದೆ. ಆದರೆ, ಪರೀಕ್ಷೆ ಮಕ್ಕಳಿಗೆ ಬಹಳ ಮುಖ್ಯವಾದದ್ದು. ಮಕ್ಕಳ ಭವಿಷ್ಯ ಪರೀಕ್ಷೆಯಲ್ಲಿದೆ. ಮಕ್ಕಳ ಭವಿಷ್ಯಕ್ಕೆ ಯಾವುದೇ ಅಡಚಣೆ ಮಾಡುವುದಿಲ್ಲ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

Also Read  ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಬಳಿ ಅಗ್ನಿ ಅವಘಡ

ಬಂದ್ ಮಾಡುವ ಹೋರಾಟಗಾರರು ಪರೀಕ್ಷೆಗೆ ಹೋಗಬೇಡಿ ಎಂದು ಮಕ್ಕಳಿಗೆ ಹೇಳುವುದಿಲ್ಲ. ಮಕ್ಕಳು ಗೊಂದಲ ಆಗುವುದು ಬೇಡ. 6,7,8,9 ನೇ ತರಗತಿ ಪರೀಕ್ಷೆಗಳು ನಿಗದಿಯಂತೆ ನಡೆಯುತ್ತವೆ. ಮಕ್ಕಳು ಪರೀಕ್ಷೆ ಬರೆಯಲಿ. ಈಗಾಗಲೇ ವೇಳಾಪಟ್ಟಿ ಸಿದ್ಧತೆ ಮಾಡಿ ಪ್ರಕಟ ಮಾಡಿದ್ದೇವೆ‌. ವೇಳಾಪಟ್ಟಿ ಬದಲಾವಣೆ ಆದರೆ, ಕಷ್ಟ ಆಗುತ್ತದೆ. ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡಿಕೆ ಸರಿಯಲ್ಲ ಎಂದರು.

error: Content is protected !!
Scroll to Top