(ನ್ಯೂಸ್ ಕಡಬ) newskadaba.com ಮಾ. 01 ರುವನಂತಪುರಂ: ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದ ಫೇರ್ ವೆಲ್ ಪಾರ್ಟಿಯೊಂದರ ವೇಳೆ ಕಾಣಿಸಿಕೊಂಡ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಸಣ್ಣ ಜಗಳ ದುರಂತ ತಿರುವು ಪಡೆದುಕೊಂಡು 16 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ.

10ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಶಹಬಾಸ್ (16) ಅಸುನೀಗಿದ ದುರ್ದೈವಿ ಆಗಿದ್ದು, ಕೋಝಿಕ್ಕೋಡ್ ಜಿಲ್ಲೆಯ ಖಾಸಗಿ ಟ್ಯೂಷನ್ ಸೆಂಟರ್ ಬಳಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದ ವೇಳೆ ಆತ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.