ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ: ಮೊದಲ ದಿನವೇ ಪ್ರತಿಭಟನೆಗೆ ಬಿಜೆಪಿ ಮುಂದು!

(ನ್ಯೂಸ್ ಕಡಬ) newskadaba.com ಮಾ. 03 ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಪ್ರತಿಭಟನೆಗೆ ಪ್ರತಿಪಕ್ಷ ಬಿಜೆಪಿ ಸಜ್ಜಾಗಿದೆ. ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ಕಾಂಗ್ರೆಸ್ ಸರ್ಕಾರದ ಕ್ರಮದ ವಿರುದ್ಧ ಶಾಸಕರ ಭವನದಿಂದ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಲು ಯೋಜಿಸಿದೆ.

ವಿಧಾನಸೌಧದಲ್ಲಿ ಇಂದು ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವುದರೊಂದಿಗೆ ಆರಂಭವಾಗುವ ಬಜೆಟ್ ಅಧಿವೇಶನ, ಮಾರ್ಚ್ 21 ರಂದು ಕೊನೆಗೊಳ್ಳಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7 ರಂದು ತಮ್ಮ 16 ನೇ ಬಜೆಟ್ ಮಂಡಿಸಲಿದ್ದಾರೆ. ಅದೇ ದಿನ, ಕೇಸರಿ ಪಕ್ಷವು ರಾಜ್ಯ ಸರ್ಕಾರದ “ಅಧಿಕ ಸಾಲಗಳ” ವಿರುದ್ಧ ಮತ್ತೊಂದು ಪ್ರತಿಭಟನಾ ಮೆರಣಿಗೆ ನಡೆಸಲು ಯೋಜಿಸಿದೆ.

Also Read  ಪುತ್ತೂರು: ಜೆರಾಕ್ಸ್ ಅಂಗಡಿಯಿಂದ ಕಳವು     

error: Content is protected !!
Scroll to Top