(ನ್ಯೂಸ್ ಕಡಬ) newskadaba.com ಮಾ. 03: ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ನಡೆದಿರುವ ಹಲ್ಲೆ ಆರೋಪಕ್ಕೆ ಸಂಬಂಧಿಸಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ ಅವರ ಬೆಂಬಲಿಗರೆನ್ನಲಾದ 11 ಮಂದಿ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.


ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ಎಂಬವರು ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.
ಹಲ್ಲೆ ನಡೆದ ಸಂದರ್ಭ ಸ್ಥಳದಲ್ಲಿದ್ದ ಶಾಸಕ ವೇದವ್ಯಾಸ ಕಾಮತ್, “ಆತನ ಕೈ ಕಾಲು ಮುರಿಯಿರಿ” ಹಲ್ಲೆ ಆರೋಪಿಗಳಿಗೆ ದುಷ್ಪ್ರೇರಣೆ ನೀಡಿದ್ದಾರೆ ಎಂದು ಯಶವಂತ ಪ್ರಭು ದೂರಿನಲ್ಲಿ ಉಲ್ಲೇಖಿಸಿದ್ದಾರೆ.