ರಾಮಮಂದಿರ ಸ್ಫೋಟಿಸಲು ಸಂಚು: ಶಂಕಿತ ಉಗ್ರ ಅಬ್ದುಲ್ ರೆಹಮಾನ್ ಬಂಧಿಸಿದ ಗುಜರಾತ್ ಎಟಿಎಸ್, ಗ್ರನೇಡ್ ವಶ

(ನ್ಯೂಸ್ ಕಡಬ) newskadaba.com ಮಾ. 03: ಅಹಮದಾಬಾದ್: ಗುಜರಾತ್ ಎಟಿಎಸ್ ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಶಂಕಿತ ಉಗ್ರ 19 ವರ್ಷದ ಅಬ್ದುಲ್ ರೆಹಮಾನ್‌ನನ್ನು ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಸಂಗ್ರಹಿಸಲಾದ ಗುಪ್ತಚರ ಮಾಹಿತಿಯ ಮೇರೆಗೆ ದಾಳಿ ನಡೆಸಿ ಅಬ್ದುಲ್ ರೆಹಮಾನ್ ನನ್ನು ಬಂಧಿಸಲಾಗಿದೆ. ದಾಳಿ ವೇಳೆ ಪಾಳುಬಿದ್ದ ಮನೆಯೊಂದರಲ್ಲಿ ಎರಡು ಜೀವಂತ ಹ್ಯಾಂಡ್ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಫರಿದಾಬಾದ್ ಪೊಲೀಸರ ಸಹಾಯದಿಂದ, ಎಟಿಎಸ್ ಸಂಪೂರ್ಣ ಶೋಧ ನಡೆಸಿ, ಸಂಭಾವ್ಯ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಿದೆ. ಅಬ್ದುಲ್ ರೆಹಮಾನ್‌ನ ಭಯೋತ್ಪಾದಕ ಸಂಪರ್ಕಗಳ ಕುರಿತು ತನಿಖೆ ಮುಂದುವರೆದಿದೆ. ಮೂಲಗಳ ಪ್ರಕಾರ, ಅಯೋಧ್ಯೆಯ ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಹೇಳಲಾಗುತ್ತಿದೆ.

error: Content is protected !!
Scroll to Top