(ನ್ಯೂಸ್ ಕಡಬ) newskadaba.com ಮಾ. 03: ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ಯಾವುದೇ ಫಿಲ್ಟರ್ ಮಾಡುತ್ತಿಲ್ಲ. ಎಲ್ಲರಿಗೂ ಹಣ ಸಿಗುತ್ತದೆ. ಯಾವುದೇ ಗೊಂದಲ ಬೇಡ, ಐದು ವರ್ಷ ಮಾತಿನಂತೆ ನಡೆಯುತ್ತೇವೆ. ಗೃಹಲಕ್ಷ್ಮಿ ನಗದು ಹಾಕುವುದು ಸಲ್ಪ ವಿಳಂಬವಾಗಿತ್ತು, ಇದೀಗ ಎಲ್ಲಾ ಸರಿಯಾಗಿದೆ. ಈಗ ಎರಡು ತಿಂಗಳ ಕಂತು ಬಿಡುಗಡೆಯಾಗುತ್ತದೆ ಎಂದು ತಿಳಿಸಿದರು.



ಸಿ.ಟಿ.ರವಿ ಗಲಾಟೆ ಪ್ರಕರಣದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ಇಂದು ಸದನಕ್ಕೆ ಬಂದಿದ್ದೇನೆ. ನಿಮಗೆ ಎಷ್ಟು ಮಾಹಿತಿ ಇದೆಯೋ ನನಗೂ ಅಷ್ಟೇ ಮಾಹಿತಿ ಇದೆ. ಎಥಿಕ್ಸ್ ಕಮಿಟಿಗೆ ಕೊಟ್ಟಿರೋ ವಿಚಾರದ ಬಗ್ಗೆ ಗೊತ್ತಿಲ್ಲ. ನಾನು ಆಸ್ಪತ್ರೆಯಲ್ಲಿ ಇದ್ದಾಗ ಹೊರಟ್ಟಿ ಅವರು ಆಸ್ಪತ್ರೆಗೆ ಬಂದಿದ್ದರು. ಇದರ ಬಗ್ಗೆ ಏನೂ ಮಾತನಾಡಿಲ್ಲ. ಯಾರಿಗೂ ಈ ರೀತಿ ಆಗಬಾರದು. ಇದರ ಬಗ್ಗೆ ಮುಂದೆ ಮಾತನಾಡುತ್ತೇನೆ ಎಂದರು.