ಹಕ್ಕಿಜ್ವರ: ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

(ನ್ಯೂಸ್ ಕಡಬ) newskadaba.com ಮಾ. 05 ಬೆಂಗಳೂರು: ಬಳ್ಳಾರಿ, ಚಿಕ್ಕಬಳ್ಳಾಪುರ ಜಿಲ್ಲೆಗಳ ನಂತರ ಇದೀಗ ಬೆಂಗಳೂರಿಗೂ ಹಕ್ಕಿಜ್ವರ ಭೀತಿ ಕಾಡಲು ಶುರುವಾಗಿದೆ, ಚಿಕ್ಕಬಳ್ಳಾಪುರದಲ್ಲಿ ಹಕ್ಕಿಜ್ವರ ಧೃಡಪಟ್ಟಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ ಮತ್ತು ಹಕ್ಕಿಜ್ವರ ನಿಯಂತ್ರಣಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಇದೀಗ ಬೆಂಗಳೂರಿನ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಸಿದ್ಧತೆಗೆ ಸೂಚನೆ ನೀಡಲಾಗಿದ್ದು, ಪ್ರತ್ಯೇಕ ವಾರ್ಡ್ ಮಾಡುವಂತೆ ನಿರ್ದೇಶನ ಮಾಡಲಾಗಿದೆ. ಹಕ್ಕಿಜ್ವರದ ಗುಣಲಕ್ಷಣಗಳು ಕಂಡು ಬಂದರೆ RTPCR ಟೆಸ್ಟ್ ಕಡ್ಡಾಯಗೊಳಿಸಲಾಗಿದೆ.ಇನ್ನು ಜ್ವರ ಬಂದಲ್ಲಿ ಜನರು ವೈದ್ಯರನ್ನು ಸಂಪರ್ಕಿಸಲು ಸೂಚಿಸಲಾಗಿದೆ.

error: Content is protected !!
Scroll to Top