ನಕ್ಸಲರಿಂದ ಐಇಡಿ ಸ್ಪೋಟ-3 ಯೋಧರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಾ. 05 ಜಾರ್ಖಂಡ್: ನಕ್ಸಲರು ಐಇಡಿ(ಸುಧಾರಿತ ಸ್ಫೋಟಕ ಸಾಧನ) ಸ್ಫೋಟಗೊಳಿಸಿದ ಪರಿಣಾಮ ಜಾರ್ಖಂಡ್‌ನ ಬಲಿಬಾ ಪ್ರದೇಶದಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ.

ಈ ಘಟನೆಯು ಭದ್ರತಾ ಪಡೆಗಳು ನಕ್ಸಲ್ ವಿರೋಧಿ ಕಾರ್ಯಚರಣೆಯನ್ನು ನಡೆಸುತ್ತಿದ್ದ ಸಂದರ್ಭದಲ್ಲಿ ನಡೆದಿದ್ದು ಗಾಯಗೊಂಡ ಸೈನಿಕರನ್ನು ವೈದ್ಯಕೀಯ ಚಿಕಿತ್ಸೆಗಾಗಿ ರಾಂಚಿಗೆ ಕರೆದೊಯ್ಯಲಾಗಿದೆ. ನಕ್ಸಲ್ ಚಟುವಟಿಕೆಗಳನ್ನು ಎದುರಿಸಲು ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ತೀವ್ರಗೊಳಿಸುತ್ತಿವೆ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Also Read  ➤ಬೇಸಿಗೆಯಲ್ಲಿ ಐಸ್ಕೋಲ್ಡ್ ನೀರು ಕುಡಿಯುವುದರಿಂದ ಆರೋಗ್ಯ ಸಮಸ್ಯೆ ಹಲವು

error: Content is protected !!
Scroll to Top