ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬೇಟೆ: ರಾಜ್ಯದ 8 ಕಡೆಗಳಲ್ಲಿ ದಾಳಿ

(ನ್ಯೂಸ್ ಕಡಬ) newskadaba.com ಮಾ. 06 ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ.

ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. 8 ಮಂದಿ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ ಡಿಪಿಎಆರ್ ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್​ ಇಂಜಿನಿಯರ್​ ಹೆಚ್​.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

Also Read  ಪಡೀಲ್‌ನಲ್ಲಿ ಭೀಕರ ಅಪಘಾತ ➤ ಬೈಕ್ ಸವಾರ ಮೃತ್ಯು

ಕೋಲಾರದಲ್ಲಿರುವ ಬೆಸ್ಕಾಂ ಎಇಇ ಜಿ.ನಾಗರಾಜ್​, ಕಲಬುರಗಿ ಲೋಕೋಪಯೋಗಿ ಚೀಫ್ ಇಂಜಿನಿಯರ್ ಜಗನ್ನಾಥ್, ದಾವಣಗೆರೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗದ ಜಿಲ್ಲಾ ಸಂಖ್ಯಾಶಾಸ್ತ್ರೀಯ ಅಧಿಕಾರಿ ಜಿ.ಎಸ್. ನಾಗರಾಜು, ತುಮಕೂರಿನಲ್ಲಿ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಜಗದೀಶ್ ಅವರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

error: Content is protected !!
Scroll to Top