(ನ್ಯೂಸ್ ಕಡಬ) newskadaba.com ಮಾ. 06 ಬೆಂಗಳೂರು: ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಪರೀಕ್ಷೆಗಳು ಆರಂಭವಾಗಿರುವ ಬೆನ್ನಲ್ಲೇ, ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲಿದ್ದು, ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಪರೀಕ್ಷೆಗಳನ್ನು ಬೇಗ ಮುಗಿಸಿ ಶಾಲೆಗಳಿಗೆ ಅವಧಿಗೂ ಮುನ್ನ ಬೇಸಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಹವಾಮಾನ ಇಲಾಖೆ ಕೂಡ ಬಹುತೇಕ ಜಿಲ್ಲೆಗಳಲ್ಲಿ ಬೇಸಿಗೆಗೂ ಮುನ್ನ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುತ್ತಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಈ ಹಿನ್ನೆಲೆ ಪೋಷಕರು ತಮ್ಮ ಮಕ್ಕಳಿಗೆ ಬೇಸಿಗೆ ರಜೆ ಯಾವಾಗ ಸಿಗುತ್ತದೆ ಎಂದು ಕಾಯುತ್ತಿದ್ದಾರೆ.
ಸಾಮಾನ್ಯವಾಗಿ ರಾಜ್ಯದಲ್ಲಿ ಏಪ್ರಿಲ್‌ನಿಂದ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ನೀಡಲಾಗುತ್ತದೆ. ಆದರೆ ಈ ಬಾರಿ ರಾಜ್ಯಾದ್ಯಂತ ಬೇಸಿಗೆಗೂ ಮುನ್ನ ತಾಪಮಾನ ಪ್ರಮಾಣ ಏರಿಕೆ ಆಗುತ್ತಲೇ ಇದೆ. ಆದ್ದರಿಂದ ಈ ಬಾರಿ ಅವಧಿಗೂ ಮುನ್ನ ಬೇಸಿಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ. ಮಾರ್ಚ್‌ನಲ್ಲಿಯೇ ಶಾಲಾ ಮಕ್ಕಳಿಗೆ ಬೇಗ ಪರೀಕ್ಷೆಗಳನ್ನು ಮುಗಿಸಿ ಬಳಿಕ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೇಗ ಅಂದ್ರೆ ಏಪ್ರಿಲ್‌ಗೂ ಮುನ್ನ ರಜೆ ಘೋಷಿಸುವ ಸಾಧ್ಯತೆಯಿದೆ.