ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷಾ ಪ್ರಶ್ನಾಪತ್ರಿಕೆ ಯೂಟ್ಯೂಬ್ ನಲ್ಲಿ ಸೋರಿಕೆ

(ನ್ಯೂಸ್ ಕಡಬ) newskadaba.com ಮಾ. 06 ಬೆಂಗಳೂರು: ವಿಜ್ಞಾನ ಮತ್ತು ಸಮಾಜ ವಿಜ್ಞಾನದ ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆಗೆ ಒಂದು ದಿನ ಮೊದಲು, ಪ್ರಶ್ನೆ ಪತ್ರಿಕೆಗಳು ಯೂಟ್ಯೂಬ್‌ನಲ್ಲಿ ಪ್ರಸಾರವಾಗಿದ್ದವು, ಶಿಕ್ಷಣ ಇಲಾಖೆಯಿಂದಲೇ ಸೋರಿಕೆಯಾಗಿರುವ ಸಾಧ್ಯತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆಗಳು ಮಾರ್ಚ್ 3 ಮತ್ತು 4 ರಂದು ನಿಗದಿಯಾಗಿದ್ದವು. ಆದರೆ ಮಾರ್ಚ್ 2 ಮತ್ತು 3 ರಂದೇ ಸಂಪೂರ್ಣ ಪ್ರಶ್ನೆ ಪತ್ರಿಕೆಗಳು ಯೂಟ್ಯೂಬ್‌ನಲ್ಲಿ ಕಾಣಿಸಿಕೊಂಡಿವೆ.

ಈ ಬಗ್ಗೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಟಿಎನ್‌ಐಇಗೆ ಮಾಹಿತಿ ನೀಡಿದ್ದು, ಪ್ರಶ್ನೆ ಪತ್ರಿಕೆಗಳು ಪರೀಕ್ಷೆಗೆ ಕೇವಲ ಎರಡು ಗಂಟೆಗಳ ಮೊದಲು ಶಾಲೆಗಳು ಅಥವಾ ಪರೀಕ್ಷಾ ಕೇಂದ್ರಗಳನ್ನು ತಲುಪಬೇಕು ಮತ್ತು ಅವುಗಳನ್ನು ಒಂದು ದಿನ ಮುಂಚಿತವಾಗಿ ವಿತರಣಾ ಕೇಂದ್ರಗಳಿಗೆ ಕಳುಹಿಸಲಾಗುತ್ತದೆ. ಆದರೆ ಒಂದು ದಿನ ಮುಂಚಿತವಾಗಿ ಆನ್‌ಲೈನ್‌ನಲ್ಲಿ ಹೇಗೆ ಸೋರಿಕೆ ಮಾಡಲಾಗಿದೆ ಎಂಬ ಪ್ರಶ್ನೆ ಹುಟ್ಟುಕೊಂಡಿದೆ ಎಂದರು.

error: Content is protected !!
Scroll to Top