2025-26ನೇ ಸಾಲಿನ ರಾಜ್ಯ ಬಜೆಟ್: ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 16ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.

1995ರಲ್ಲಿ. ಎಚ್.ಡಿ ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ಮೊದಲ ಬಜೆಟ್‌ ಮಂಡಿಸಿದ್ದರು. 1995 ಮತ್ತು 1996ರಲ್ಲಿ ದೇವೇಗೌಡರು ಸಿಎಂ ಆಗಿದ್ದಾಗ, 1997, 1998, 1999ರಲ್ಲಿ ಜೆ.ಎಚ್‌. ಪಟೇಲ್‌ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸಿದ್ದರು.

2013ರಲ್ಲಿ ಮೊದಲ ಬಾರಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು 2013, 2014, 2015, 2016, 2017 ಮತ್ತು 2018 (ಲೇಖಾನುದಾನ) ಹೀಗೆ ನಿರಂತರವಾಗಿ ಆರು ಬಾರಿ ಬಜೆಟ್‌ ಮಂಡಿಸಿದ್ದರು. 2018ರಲ್ಲಿ ಮಂಡಿಸಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಆಗಿರಲಿಲ್ಲ. ಇದು ಅವರು ಮಂಡಿಸಿದ 13ನೇ ಬಜೆಟ್‌ ಆಗಿತ್ತು.

Also Read  ಮಂಗಳೂರು ತಾಲೂಕು ಕೃಷಿ ಅಭಿಯಾನ ಕಾರ್ಯಕ್ರಮ

error: Content is protected !!
Scroll to Top