(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ 16 ನೇ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಕೇವಲ ಕಾಗದದ ಹಾಳೆಗಳ ಮೇಲಿನ ಲೆಕ್ಕಾಚಾರವಲ್ಲ, ಬದಲಾಗಿ ರಾಜ್ಯದ ಏಳು ಕೋಟಿ ಕನ್ನಡಿಗರ ಭವಿಷ್ಯವನ್ನು ರೂಪಿಸುವ ಕೈಪಿಡಿ ಎಂದು ನಾನು ನಂಬುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಪಾಲರ ವಂದನಾ ನಿರ್ಣಯ ಚರ್ಚೆಯಲ್ಲಿ ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ, ಬಜೆಟ್ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.
2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಇದೆ. ಕಳೆದ ಬಾರಿಯ ಬಜೆಟ್ ಗಾತ್ರ 3,71,383 ಕೋಟಿ ರೂ. ಇತ್ತು. ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿದ್ದು, ಕಳೆದ ಬಜೆಟ್ಗಿಂತ ಈ ಬಾರಿ 38,166 ಕೋಟಿ ಹೆಚ್ಚಳವಾಗಿದೆ.