ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆ ಖಂಡಿಸಿ ರೈಲಿನೊಳಗೇ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಾ. 10 ಬೆಂಗಳೂರು: ರಾಜಧಾನಿಯಲ್ಲಿ ನಮ್ಮ ಮೆಟ್ರೋ ಪ್ರಯಾಣ ದರವನ್ನು ದುಪ್ಪಟ್ಟು ಹೆಚ್ಚಿಸಿದ ಕ್ರಮವನ್ನು ಖಂಡಿಸಿ, ದರವನ್ನು ಕಡಿಮೆ ಮಾಡುವಂತೆ ಒತ್ತಾಯಿಸಿ ಭಾನುವಾರ ಮೆಟ್ರೋ ರೈಲಿನ ಒಳಗಡೆ ಗ್ರೀನ್ ಪೀಸ್ ಇಂಡಿಯಾ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೆಟ್ರೋ ದರ ಏರಿಕೆಯ ಒಂದು ತಿಂಗಳ ನಂತರವೂ ಜನರ ಆಕ್ರೋಶ, ಪ್ರತಿಭಟನೆ ನಿಂತಿಲ್ಲ. ನಿನ್ನೆ ಮೆಟ್ರೋದ ಒಳಗೆ ಗ್ರೀನ್‌ ಪೀಸ್‌ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಹತ್ತಿದ ಕಾರ್ಯಕರ್ತರು, ರೈಲಿನ ಒಳಗಡೆ ಬೆಲೆ ಏರಿಕೆಯಿಂದ ಅಸಮಾನತೆ ಏರಿಕೆ ಎಂಬ ಫಲ ಪ್ರದರ್ಶಿಸಿ ಮೌನ ಪ್ರತಿಭಟಿಸಿದರು. ಬಳಿಕ ಎಂ. ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಹೊರಬಂದ ಬಳಿಕ ‘ಮೆಟ್ರೋ ಪರಿಷ್ಕೃತ ದರವನ್ನು ಹಿಂಪಡೆಯಿರಿ’ ಎಂಬ ಆಗ್ರಹದ ಫಲಕ ಪ್ರದರ್ಶಿಸಿದರು.

Also Read  ಗೂಡ್ಸ್ ಟೆಂಪೋ ಮತ್ತು ಸ್ಕೂಟರ್ ನಡುವೆ ಡಿಕ್ಕಿ

error: Content is protected !!
Scroll to Top