(ನ್ಯೂಸ್ ಕಡಬ) newskadaba.com ಮಾ. 10 ಒಟ್ಟಾವಾ: ಕೆನಡಾದ ಲಿಬರಲ್ ಪಕ್ಷವು ದೇಶದ ಮುಂದಿನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಅವರನ್ನು ಬಹುಮತದಿಂದ ಆಯ್ಕೆ ಮಾಡಿದೆ. ಕಾರ್ನಿಯವರು ಆಯ್ಕೆಯಾಗುತ್ತಿದ್ದಂತೆ ಅಮೆರಿಕಾ ಅಧ್ಯಕ್ಷರ ಮೇಲೆ ಹರಿಹಾಯ್ದಿದ್ದು, ಕೆನಡಾದ ಕಾರ್ಮಿಕರು, ಕುಟುಂಬಗಳು ಮತ್ತು ವ್ಯವಹಾರಗಳ ಮೇಲೆ ಅಮೆರಿಕ ದಾಳಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಅವರನ್ನು ಯಶಸ್ವಿಯಾಗಲು ನಾವು ಬಿಡುವುದಿಲ್ಲ ಎಂದು 59 ವರ್ಷದ ಮಾರ್ಕ್ ಕಾರ್ನಿಯವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಡುಗಿದ್ದಾರೆ. ನಿರ್ಗಮಿತ ಲಿಬರಲ್ ನಾಯಕ ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಸಮರ ಮತ್ತು ದೇಶವನ್ನು ವಶಪಡಿಸಿಕೊಳ್ಳುವ ಬೆದರಿಕೆಯನ್ನು ಎದುರಿಸುತ್ತಿರುವ ಮತ್ತು ಫೆಡರಲ್ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ನೂತನ ಪ್ರಧಾನಿ ಆಯ್ಕೆ ಮಹತ್ವ ಪಡೆದುಕೊಂಡಿದೆ.