(ನ್ಯೂಸ್ ಕಡಬ) newskadaba.com ಮಾ. 10 ಬೆಂಗಳೂರು: ಕೆಲವು ದಿನಗಳಿಂದ ಏರಿಕೆಯಾಗುತ್ತಿದ್ದ ಚಿನ್ನದ ದರ (Gold Price Today) ಇಂದು (ಮಾ. 10) ಕೂಡ ದುಬಾರಿಯಾಗಿ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಿದೆ. ಸೋಮವಾರ ಬೆಂಗಳೂರಿನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ದರ 10 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 11 ರೂ. ಹೆಚ್ಚಾಗಿದೆ. ಆ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 8,050 ರೂ. ತಲುಪಿದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 8,782 ರೂ. ಆಗಿದೆ.


ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನ 64,320 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 80,500 ರೂ. ಮತ್ತು 100 ಗ್ರಾಂಗೆ 8,05,000 ರೂ. ನೀಡಬೇಕಾಗುತ್ತದೆ. ಇನ್ನು 24 ಕ್ಯಾರಟ್‌ನ 8 ಗ್ರಾಂ ಚಿನ್ನ 70,256 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 87,820 ರೂ. ಮತ್ತು 100 ಗ್ರಾಂಗೆ 8,78,200 ರೂ. ಪಾವತಿಸಬೇಕಾಗುತ್ತದೆ.