(ನ್ಯೂಸ್ ಕಡಬ) newskadaba.com ಮಾ. 10 ಬೆಂಗಳೂರು: ಸಾಲ ಪಡೆಯುವ ಮತ್ತು ನಂತರದ ಸಾಲಗಳಲ್ಲಿಯೇ ಮುಳುಗಿಹೋಗಿರುವ ಅಸಹಾಯಕರನ್ನು ಕಾಪಾಡುವ ಮತ್ತು ರಕ್ಷಿಸುವ ಉದ್ದೇಶದ 2025ನೇ ಸಾಲಿನ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು.


ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ವಿಧೇಯಕ ಕುರಿತು ಮಾತನಾಡಿ, ಬಲವಂತವಾಗಿ ಸಾಲ ವಸೂಲಿ ಮಾಡುವುದು, ಅಧಿಕ ಬಡ್ಡಿ ವಿಧಿಸಿ ತೊಂದರೆ ಕೊಡುವುದರಿಂದ ಸಾಲಗಾರರು ಬೀದಿಗೆ ಬರುವಂತಹ ಮತ್ತು ಆತಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಗೆ ದೂಡುವುದನ್ನು ತಡೆಯಲು ಹಾಗೂ ತಪ್ಪಿತಸ್ಥರಿಗೆ 10 ವರ್ಷ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸಲು ಈ ವಿಧೇಯಕವನ್ನು ಮಂಡಿಸಲಾಗಿದೆ.