(ನ್ಯೂಸ್ ಕಡಬ) newskadaba.com ಮಾ. 11: ಬೆಂಗಳೂರು: ನೀರಿನ ಅಭಾವ, ವಿದ್ಯುತ್ ಸಮಸ್ಯೆಯಿಂದ ಸಾಮಾನ್ಯವಾಗಿ ಬೇಸಿಗೆಯಲ್ಲಿ ತರಕಾರಿಗಳ ಬೆಲೆ ಗಗನಕ್ಕೇರುವುದು ಸಾಮಾನ್ಯ. ಸೊಪ್ಪು ಹಾಗೂ ತರಕಾರಿ ಬೆಲೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಸಗಟು ದರದಲ್ಲಿ ಹುರುಳಿಕಾಯಿ ಹೊರತುಪಡಿಸಿದರೆ ಎಲ್ಲಾ ತರಕಾರಿ ಬೆಲೆ 40 ರೂ. ಆಸುಪಾಸಿನಲ್ಲಿದೆ ಚಿಲ್ಲರೆ ದರದಲ್ಲಿ 50 ರೂ.ಗೆ ಮಾರಾಟವಾಗುತ್ತಿದೆ.


ತರಕಾರಿ ಬೆಳೆಯಲು ಹೆಚ್ಚಾಗಿ ನೀರಿನ ಅವಶ್ಯಕತೆ ಇದ್ದು ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಬೆಳೆಗಳಿಗೆ ಹೊಡೆತ ಬೀಳುತ್ತಿತ್ತು. ಆದರೆ ಈ ಬಾರಿ ಅಂತಹ ಸಮಸ್ಯೆ ಎದುರಾಗಿಲ್ಲ.