(ನ್ಯೂಸ್ ಕಡಬ) newskadaba.com ಮಾ. 11ತುಮಕೂರು:ಆಟೋ ಪ್ರಯಾಣಿಕರೊಬ್ಬರು ಮರೆತು ಬಿಟ್ಟು ಹೋಗಿದ್ದ ಸುಮಾರು 4 ಲಕ್ಷ ರೂ. ಮೌಲ್ಯದ ಬೆಲೆ ಬಾಳುವ ಚಿನ್ನದ ಒಡವೆಗಳನ್ನು ಆಟೋ ಚಾಲಕ ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ನಗರದ ಹನುಮಂತಪುರ ನಿವಾಸಿ ರವಿಕುಮಾರ್ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ.
ಹಾಸನ ಜಿಲ್ಲೆಯ ಅರಸೀಕೆರೆ ಮೂಲದ ಗಾಯತ್ರಿ ಎಂಬುವರು ಕುಂದೂರು ಗ್ರಾಮದಲ್ಲಿ ತಮ್ಮ ಸಂಬಂಧಿಕರೊಬ್ಬರ ಮನೆಗೆ ಸೀಮಂತ ಕಾರ್ಯಕ್ರಮಕ್ಕೆ ಬಂದಿದ್ದರು.