(ನ್ಯೂಸ್ ಕಡಬ) newskadaba.com ಮಾ. 12 ಸಂಭಾಲ್: ವಿಷಪೂರಿತ ಇಂಜೆಕ್ಷನ್ ನೀಡಿ ಬಿಜೆಪಿ ನಾಯಕರೊಬ್ಬರನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ನಲ್ಲಿ ನಡೆದಿದೆ. ದಫ್ತಾರಾ ಗ್ರಾಮದ ಗುಲ್ಫಾಮ್ ಸಿಂಗ್ ಯಾದವ್ (60) ಮೃತಪಟ್ಟವರು.

ಯಾದವ್ ತಮ್ಮ ಜಮೀನಿನಲ್ಲಿ ಕುಳಿತಿದ್ದ ವೇಳೆ ಮೂವರು ವೇಳೆ ಮೂವರು ದುಷ್ಕರ್ಮಿಗಳು ಬೈಕ್ ನಲ್ಲಿ ಬಂದು ವಿಷಪೂರಿತ ಇಂಜೆಕ್ಷನ್ ಚುಚ್ಚಿ ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ. ವಿಷ ಮೈಯಲ್ಲಿ ಹರಡಿ ತೀವ್ರ ಅಸ್ವಸ್ಥರಾಗಿದ್ದ ಯಾದವ್ ಅವರನ್ನು ಚಿಕಿತ್ಸೆಗಾಗಿ ಅಲಿಗಢ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ.