ಕಳೆದೆರಡು ವರ್ಷದಲ್ಲಿ ಸ್ಕಿಲ್ ಇಂಡಿಯಾ ಕಾರ್ಯಕ್ರಮದಡಿ ದ.ಕ.ದ ನೂರಾರು ಯುವಕರಿಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಾ. 12: ಮಂಗಳೂರಿನಲ್ಲಿ ಯುವಕರಿಗೆ ನೀಡಲಾಗುತ್ತಿರುವ ಪ್ರಾದೇಶಿಕ ಪೂರಕ ಕೌಶಲ್ಯಾಭಿವೃದ್ಧಿ ತರಬೇತಿಯ ಕುರಿತು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ‘ಕೌಶಲ್ಯ ಭಾರತ ಕಾರ್ಯಕ್ರಮದಡಿ ದಕ್ಷಿಣ ಕನ್ನಡದಲ್ಲಿ ನೂರಾರು ಯುವಕರಿಗೆ ತರಬೇತಿ ನೀಡುತ್ತಿದ್ದು, ಅವರನ್ನು ವಲಯಗಳಾದ್ಯಂತ ಉದ್ಯಮಕ್ಕೆ ಸಂಬಂಧಿಸಿದ ಕೌಶಲ್ಯಗಳೊಂದಿಗೆ ಸಜ್ಜುಗೊಳಿಸುತ್ತಿದೆ ಎಂದು ತಿಳಿಸಿದೆ.

ಲೋಕಸಭೆಯಲ್ಲಿ ಸಂಸದರು  ಚುಕ್ಕೆ ಗುರುತಿಲ್ಲದ ಕೇಳಿದ ಪ್ರಶ್ನೆಗೆ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ರಾಜ್ಯ ಸಚಿವರಾದ ಜಯಂತ್ ಚೌಧರಿ ಅವರು ಸೋಮವಾರ ನೀಡಿದ ಲಿಖಿತ ಪ್ರತಿಕ್ರಿಯೆಯಲ್ಲಿ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ (PMKVY 4.0), ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ಪ್ರಚಾರ ಯೋಜನೆ (NAPS), ಮತ್ತು ಜನ ಶಿಕ್ಷಣ ಸಂಸ್ಥಾನ (JSS) ಗೆ ಬೆಂಬಲ ನೀಡುವ ಯೋಜನೆಯನ್ನು ಒಳಗೊಂಡಿರುವ ಕೌಶಲ್ಯ ಭಾರತ ಕಾರ್ಯಕ್ರಮವು 2022-23ನೇ ಹಣಕಾಸು ವರ್ಷದಿಂದ ಮಂಗಳೂರು ನಗರವನ್ನು ಒಳಗೊಂಡ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಭಾರತದಾದ್ಯಂತ ಪ್ರಾದೇಶಿಕ ಅಗತ್ಯಗಳಿಗೆ ಅನುಗುಣವಾಗಿ ಉದ್ಯಮ-ಸಂಬಂಧಿತ ಕೌಶಲ್ಯಗಳೊಂದಿಗೆ ಯುವಕರನ್ನು ಸಜ್ಜುಗೊಳಿಸುತ್ತಿದೆ. ಪಿಎಂಕೆವಿಐ 4.0 ಕಾರ್ಯಕ್ರಮದಡಿ ದಕ್ಷಿಣ ಕನ್ನಡದಲ್ಲಿ ಮೀನುಗಾರಿಕೆ ಹಾಗೂ ಸೀಫುಡ್ ಸಂಸ್ಕರಣೆ ಸಂಬಂಧ 570 ಮಂದಿ ತಂತ್ರಜ್ಞರಿಗೆ ಹಾಗೂ ಪ್ರವಾಸೋದ್ಯಮ ಮತ್ತು ಆತಿಥ್ಯಕ್ಕೆ ಸಂಬಂಧಿಸಿದಂತೆ 636 ಮಂದಿಗೆ ತರಬೇತಿ ನೀಡಲಾಗಿದೆ. ಜತೆಗೆ  ಶಿಪ್ ಬಿಲ್ಡಿಂಗ್ ಹಾಗೂ ಸಮುದ್ರ ಪ್ರವಾಸೋದ್ಯಮದ ಬಗ್ಗೆಯೂ ತರಬೇತಿ ನೀಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ

error: Content is protected !!
Scroll to Top