ಪೆರಿಯಡ್ಕ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ► ಸಮ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸವಣೂರು, ಮಾ.30. ಮಕ್ಕಳ ತಾಯಂದಿರು ಮಕ್ಕಳಲ್ಲಿರುವ ಧನಾತ್ಮಕ ಗುಣವನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಕ್ಕಳು ಪ್ರತಿಭಾನ್ವಿತರಾಗಿ ಬೆಳೆಯಲು ಸಾಧ್ಯ ಎಂದು ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸುಜಾತ ಹೇಳಿದರು.ಅವರು ಸವಣೂರು ಗ್ರಾಮದ ಪೆರಿಯಡ್ಕ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ಮತ್ತು ಅಂಗನವಾಡಿ ಕೇಂದ್ರದ ಸಹಯೋಗದಲ್ಲಿ ನಡೆದ ಬಾಲ ಮೇಳ, ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪುತ್ತೂರು ತಾ.ಪಂ.ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸಂಚಲನ ಮಂಗಳೂರು ಇದರ ಸದಸ್ಯೆ, ನೋಟರಿ ನ್ಯಾಯವಾದಿ ಸಾಯಿರಾ ಕೆ. ಝುಬೇರ್ ಅವರು, ಮಹಿಳೆಯರ ಕಾನೂನು, ಲೈಂಗಿಕ ದೌರ್ಜನ್ಯ, ಬಾಲ್ಯವಿವಾಹ, ಮಹಿಳೆ ಮತ್ತು ಮಕ್ಕಳ ರಕ್ಷಣೆ, ಮಕ್ಕಳ ಪಾಲನೆ ಪೋಷಣೆಯಲ್ಲಿ ತಾಯಂದಿರು ವಹಿಸಿಕೊಳ್ಳಬೆಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಿದರು.

Also Read  ಬೆಳ್ಳಾರೆ ಹಾಡಹಗಲೇ ಚಿನ್ನದ ಸರ ಎಗರಿಸಿದ ಆರೋಪಿಗಳು

ಸಮ್ಮಾನ
ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾದ ವಸಂತಿ ಶಿವರಾಮ ಗೌಡ ಮೆದು ಅವರನ್ನು ಸಮ್ಮಾನಿಸಲಾಯಿತು. ಈ ಸಂದರ್ಭ ಸವಣೂರು ಮೊಗರು ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕಿ ಪುಷ್ಪಾ ಕುಮಾರಿ, ಜಿಲ್ಲಾ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಸಂಘದ ಉಪಾಧ್ಯಕ್ಷೆ ವಿಜಯ ಈಶ್ವರ ಗೌಡ ಕಾಯರ್ಗ, ಸವಣೂರು ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ರಝಾಕ್ ಕೆನರಾ, ದ.ಕ.ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ, ರಾಜ್ಯ ಯುವ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಪುತ್ತೂರು ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು, ಬಾಲ ವಿಕಾಸ ಸಮಿತಿಯ ಸದಸ್ಯರಾದ ಇಬ್ರಾಹಿಂ ಎಂ ಎಸ್ ಪಣೆಮಜಲು, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಅಂಗನವಾಡಿ ಪುಟಾಣಿಗಳ ತಾಯಂದಿರು ಉಪಸ್ಥಿತರಿದ್ದರು.

ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಯಶೋದಾ ಅವರು ಸ್ವಾಗತಿಸಿ, ಸವಣೂರು ಗ್ರಾಮ ಪಂಚಾಯತ್ ಸದಸ್ಯ ಎಂ.ಎ.ರಫೀಕ್ ವಂದಿಸಿದರು. ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಮೋಹಿನಿ ಸೀತಾರಾಮ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಗಳು ನಡೆಯಿತು.

Also Read  ಸವಣೂರು; 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ 

error: Content is protected !!
Scroll to Top