(ನ್ಯೂಸ್ ಕಡಬ) newskadaba.com ಮಾ. 13: ಗ್ಯಾಸ್ ಟ್ಯಾಂಕರ್ ವಾಹನ ಚಾಲಕ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ.

ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಬದ್ಘಾವರ್ ಉಜ್ಜಯಿನಿ ಹೆದ್ದಾರಿಯ ಬಮನ್‌ಸುತಾ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಕಾರು ಮತ್ತು ಜೀಪ್‌ನಲ್ಲಿದ್ದ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಧಾರ್ ಎಸ್‌ಪಿ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.