(ನ್ಯೂಸ್ ಕಡಬ) newskadaba.com ಮಾ. 13: ರಾಜ್ಯದಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಏಷ್ಯಾ ಅಭಿವೃದ್ಧಿ ಬ್ಯಾಂಕಿನೊಂದಿಗೆ ವಿಸ್ತರಿಸುವ ಕುರಿತಂತೆ ಶಾಲಾ ಶಿಕ್ಷಣ ಹಾಗೂ ಪ್ರಾಥಮಿಕ ಸಚಿವ ಮಧು ಬಂಗಾರಪ್ಪ ವಿಧಾನಸೌಧದಲ್ಲಿಂದು ಬ್ಯಾಂಕಿನ ಅಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.


ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗಿದೆ. ಈ ಶಾಲೆಗಳಿಂದಾಗಿ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ವಿಕಾಸ ಹಾಗೂ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶವಿದೆ. ಮಕ್ಕಳು ಕಲಿಕೆಯಲ್ಲಿ ಹಿಂದುಳಿಯದಂತೆ ಎಚ್ಚರ ವಹಿಸುವಂತೆ ಸಮಗ್ರವಾಗಿ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ಸಚಿವರು ಸಭೆಯಲ್ಲಿ ನೀಡಿದರು.