(ನ್ಯೂಸ್ ಕಡಬ) newskadaba.com ಮಾ. 13: ಮಂಗಳೂರು: ಫರಂಗಿಪೇಟೆಯ ಯುವಕ ದಿಗಂತ್ ನಾಪತ್ತೆ ಪ್ರಕರಣ ಜಿಲ್ಲೆಯ ಪೊಲೀಸರ ಕಾರ್ಯಾಚರಣೆ ಮೂಲಕ ಸುಖಾಂತ್ಯ ಕಂಡಿದೆ. ಆದರೆ ನಾಪತ್ತೆ ಸಂದರ್ಭದಲ್ಲಿ ಯಾವುದೇ ಸುಳಿವಿಲ್ಲದಾಗ, ಸುಳ್ಳಿನ ಮೂಲಕ ಸಮಾಜದಲ್ಲಿ ದ್ವೇಷ ಹುಟ್ಟಿಸುವ ರೀತಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಪಕ್ಷದ ಹಾಗೂ ಸಂಘಟನೆಗಳ ಪ್ರಮುಖರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.

