(ನ್ಯೂಸ್ ಕಡಬ) newskadaba.com ಮಾ. 14: ಇಲ್ಲಿನ ವಸತಿ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಪೂರ್ವಿಕಾ (13) ಸಾವನ್ನಪ್ಪಿದ ವಿದ್ಯಾರ್ಥಿನಿ.


ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕಿನ, ಕ್ಯಾತೆ ಗ್ರಾಮದ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಪೂರ್ವಿಕಾ ನನಗೆ ಸುಸ್ತಾಗುತ್ತಿದೆ ಎಂದು ಹೇಳಿದ್ದಳು. ಕೂಡಲೇ ಶಿಕ್ಷಕರು ಆಕೆಗೆ ಕೊಡ್ಲಿಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹಾಸನದ ಖಾಸಗಿ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಸಾವನ್ನಪ್ಪಿದ್ದಾಳೆ.