ವಿವಿ ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ-ಸಿಎಂ

(ನ್ಯೂಸ್ ಕಡಬ) newskadaba.com ಮಾ. 14 : ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ.

ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ತಿಳಿಸಿದರು.ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ ಆತಂಕಕ್ಕೆ ಉತ್ತರಿಸಿದರು.

ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಪಸಮಿತಿ ವರದಿ ಕೊಡುವುದು ಬಾಕಿ ಇದೆ. ವರದಿ ಬರುತ್ತಿದ್ದಂತೆ ಅದನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

error: Content is protected !!
Scroll to Top