(ನ್ಯೂಸ್ ಕಡಬ) newskadaba.com ಮಾ. 14 : ಬೆಂಗಳೂರು: ಪೋಕ್ಸೋ ಪ್ರಕರಣದ ಸಂಬಂಧ ಮಾರ್ಚ್ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ಗೆ ಹೈಕೋರ್ಟ್ ತಡೆ ನೀಡಿದೆ.
ಇದರ ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿಎಸ್ ಯಡಿಯೂಪ್ಪ ಅವರಿಗೆ ರಿಲೀಫ್ ಸಿಕ್ಕಂತಾಗಿದೆ. ಈ ವೇಳೆ ಬಿಎಸ್ ಯಡಿಯೂರಪ್ಪ ಅವರ ಅರ್ಜಿಯ ವಿಚಾರಣೆ ಅಗತ್ಯವಿದೆ ಎಂದು ಹೇಳಿದ ನ್ಯಾಯಾಲಯವು ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ತಡೆ ನೀಡಿದೆ.


ವಿಚಾರಣೆ ವೇಳೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿತ್ತು. ಖುದ್ದು ಹಾಜರಾತಿಯಿಂದಲೂ ಹೈಕೋರ್ಟ್ ವಿನಾಯಿತಿ ನೀಡಿತ್ತು. 2024ರ ಫೆಬ್ರವರಿ 2ರಂದು ಅನುಚಿತವಾಗಿ ಸ್ಪರ್ಶಿಸಿದ ಆರೋಪವಿದೆ. ಒಂದು ತಿಂಗಳ ಬಳಿಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸ್ಥಳದಲ್ಲಿದ್ದ ಸಾಕ್ಷಿಗಳು ಆ ರೀತಿಯ ಘಟನೆ ನಡೆದಿಲ್ಲವೆಂದಿದ್ದಾರೆ.