(ನ್ಯೂಸ್ ಕಡಬ) newskadaba.com ಮಾ. 15: ಮಂಗಳೂರು : ಅಕ್ರಮ ಪಿಸ್ತೂಲ್ ಮಾರಾಟ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹೆಚ್ಚಿದ್ದಾರೆ. ಕರಾವಳಿಯಲ್ಲಿ ನಿಷೇಧಿತ PFI ಸಂಘಟನೆ ಮತ್ತೆ ಆಕ್ಟಿವ್ ಆಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಕೇರಳ ಮೂಲದ ಕ್ರಿಮಿನಲ್ ಗಳಾದ ಅಬ್ದುಲ್ ಲತೀಫ್, ನೌಫಲ್, ಮಹಮ್ಮದ್ ಅಸ್ಗರ್, ಮಹಮ್ಮದ್ ಸಾಲಿ ಬಂಧಿತರು. ಬಂಧಿತರಿಂದ ಮೂರು ಪಿಸ್ತೂಲ್ ಮತ್ತು ಆರು ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಕೇರಳದಲ್ಲಿ ನಿಷೇಧಿತ PFI ಸಂಘಟನೆಯೊಂದಿಗೆ ಆರೋಪಿಗಳು ನೇರ ಸಂಬಂಧ ಹೊಂದಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.